Tuesday, May 30, 2023

Latest Posts

ಕಾಂಗ್ರೆಸ್‌ ಗೆ ಶಾಕ್ ಕೊಟ್ಟ ಆಂಟನಿ ಪುತ್ರ: ಬಿಜೆಪಿಗೆ ಸೇರ್ಪಡೆಯಾದ ಅನಿಲ್‌ ಆಂಟನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಕಾಂಗ್ರೆಸ್‌ ಗೆ ಮತ್ತೊಮ್ಮೆ ಶಾಕ್ ಆಗಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಯುಪಿಎ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕೇರಳ ಕಾಂಗ್ರೆಸ್‌ನ ಮಾಧ್ಯಮ ಸಂಯೋಜಕರಾಗಿದ್ದ ಅನಿಲ್‌ ಆಂಟನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್‌ ಗಲಭೆಯ ಕುರಿತಾಗಿ ಬಿಬಿಸಿ ಮಾಡಿದ್ದ ಸಾಕ್ಷ್ಯಚಿತ್ರವನ್ನು ಬಲವಾಗಿ ವಿರೋಧಿಸಿದ್ದರು. ಅದರ ಬೆನ್ನಲ್ಲಿಯೇ ಕಾಂಗ್ರೆಸ್‌ ಪಕ್ಷದಿಂದಲೇ ಅವರು ಟೀಕೆ ಎದುರಿಸಿದ್ದರು. ಬಳಿಕಕಾಂಗ್ರೆಸ್‌ ಪಕ್ಷದ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡಿದರು.

ಇದೀಗ ಇಂದು ಅನಿಲ್‌ ಆಂಟನಿ ಗುರುವಾರ ದೆಹಲಿಯಲ್ಲಿ ಕೇಂದ್ರ ಸಚಿವ ಪೀಯುಷ್‌ ಗೋಯೆಲ್‌ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‌ ಕೂಡ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!