ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಚುನಾವಣೆಯಲ್ಲಿ ನಾನೇ ಅಭ್ಯರ್ಥಿಯೇ ಹೊರತು ನನ್ನ ಕುಟುಂಬದವರಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಉತ್ತರ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ವೇದಿಕೆಯನ್ನು ಸಿದ್ಧಪಡಿಸುತ್ತಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಸ್ವಲ್ಪ ಸೋಲು ಕಂಡಿದೆ. ಶಾಸಕರ ಚುನಾವಣೆಗೂ ಭಾರೀ ಹಿನ್ನಡೆ ಉಂಟಾಗಿತ್ತು. ಈಗ ನಾವು ನಮ್ಮ ನೆಲೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಕೆಲಸಕ್ಕೆ ಜನ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.