ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅಧಿಕಾರ ಹಸ್ತಾಂತರಿಸಿದರು.
ನೂತನ ಆಯುಕ್ತ ಅಗ್ರವಾಲ್ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ, ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.