ಶ್ರೀಲಂಕಾದ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಶನಿವಾರ ನಡೆದ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJB) ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.

ದೇಶ ಆರ್ಥಿಕ ಬಿಕ್ಕಟ್ಟು ಎದುರಿಸಿದ ನಂತರ 2022 ರಲ್ಲಿ ಸಾಮೂಹಿಕ ಪ್ರತಿಭಟನೆಯಿಂದ ಗೋಟಾಬಯ ರಾಜಪಕ್ಸೆ ಅವರನ್ನು ಪದಚ್ಯುತಗೊಳಿಸಿದ ನಂತರ ನಡೆದ ಮೊದಲ ಚುನಾವಣೆಯಾಗಿದೆ. ಪ್ರಮಾಣ ವಚನ ಸ್ವೀಕಾರ ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಡಿಸಾನಾಯಕೆ, ಜನಾದೇಶವನ್ನು ಗೌರವಿಸಿದ್ದಕ್ಕಾಗಿ ಮತ್ತು ಅಧಿಕಾರದ ಶಾಂತಿಯುತ ಹಸ್ತಾಂತರವನ್ನು ಸುಗಮಗೊಳಿಸಿದ್ದಕ್ಕಾಗಿ ನಿರ್ಗಮಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರಿಗೆ ಧನ್ಯವಾದ ಸಲ್ಲಿಸಿದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!