ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಹು ಬೇಡಿಕೆಯ ನಟಿ ಅನುಷ್ಕಾ ಶೆಟ್ಟಿ ಯಾವಾಗ, ಯಾರನ್ನ ಮದುವೆ ಆಗ್ತಾರೆ ಎಂಬ ಕುತೂಹಲದೊಂದಿಗೆ ಎಂದು ತುದಿಗಾಲಿನಲ್ಲಿ ಅಭಿಮಾನಿಗಳು ಕಾಯ್ತಿದ್ದಾರೆ. ಸದ್ಯದಲ್ಲಿಯೇ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬೀಳಲಿದೆ.
ಹೌದು… ಕನ್ನಡತಿ’ ಅನುಷ್ಕಾ ಶೆಟ್ಟಿ ಮದ್ವೆ ಬಗ್ಗೆ ಗುಸು-ಗುಸು ಕೇಳಿಬರುತ್ತಿದೆ. ಅದೇನಪ್ಪಾ ಅಂದ್ರೆ ಅನುಷ್ಕಾ ಸದ್ಯದಲ್ಲಿಯೇ ಮದುವೆ ಆಗಲಿದ್ದಾರಂತೆ. ತಮಗಿಂತ ವಯಸ್ಸಿನಲ್ಲಿ ಚಿಕ್ಕವರಾಗಿರುವ ದುಬೈನಲ್ಲಿ ನೆಲೆಸಿರುವ ಉದ್ಯಮಿಯ ಕೈಹಿಡಿಯಲಿದ್ದಾರಂತೆ.
ಅನುಷ್ಕಾ ಮದುವೆ ವಿಚಾರವಾಗಿ ಟಾಲಿವುಡ್ ಅಂಗಳದಲ್ಲಿ ಈ ಅಂತೆ-ಕಂತೆಗಳು ರೆಕ್ಕೆ ಪುಕ್ಕ ಕಟ್ಟಿಕೊಂಡು ಹಾರಾಡುತ್ತಿದ್ದು, ಈ ಬಗ್ಗೆ ಅನುಷ್ಕಾ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ. ಅನುಷ್ಕಾ ಅವರ ಪ್ರತಿಕ್ರಿಯೆಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.