ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ವರದಿ, ಅಂಕೋಲಾ:
ಕ್ಷೇತ್ರದ ಅಭಿವೃದ್ಧಿಗೆ ದೇವರನ್ನು ನಂಬಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ, ಯಾವುದೇ ಆಪಾದನೆಗಳು ಬಂದರೂ ಬೇಸರವಿಲ್ಲ ಜನತೆಗೆ ನನ್ನ ಮೇಲೆ ಸಂಪೂರ್ಣ ಪ್ರೀತಿ, ವಿಶ್ವಾಸವಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಹೇಳಿದರು.
ಅಂಕೋಲಾದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು ಮನುಷ್ಯರಲ್ಲಿ ಮಾನವೀಯತೆ ಮುಖ್ಯ, ಮಾನವೀಯ ಮೌಲ್ಯಗಳನ್ನು ಮರೆಯುತ್ತಿರುವುದು ಇಂದು ಸಮಾಜದಲ್ಲಿ ರೋಗ, ಅನಾಹುತಗಳು ಹೆಚ್ಚಲು ಕಾರಣವಾಗಿದೆ ಎಂದ ಅವರು ಆಪಾದನೆಗಳಿಗೆ ತಲೆ ಕೆಡಿಸಿಕೊಳ್ಳದೇ ಕಾರವಾರ ಅಂಕೋಲಾ ಕ್ಷೇತ್ರದ ಅಭಿವೃದ್ಧಿಯ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ
ಮಾಡುವುದು ತಮ್ಮ ಕನಸು ಎಂದರು.
ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರವಾರ ಅಂಕೋಲಾ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಒದಗಿಸುವ ಮೂಲಕ ಸಹಕಾರ ನೀಡುತ್ತಿದ್ದಾರೆ ನರೇಂದ್ರ ಮೋದಿಯವರು ಪ್ರಧಾನಿ ಆಗಿರುವ ಸಂದರ್ಭದಲ್ಲಿ ಶಾಸಕಿಯಾಗಿ ಕೆಲಸ ಮಾಡಲು ಅವಕಾಶ ದೊರಕಿರುವುದು ತಮ್ಮ ಭಾಗ್ಯ,
ನೌಕಾನೆಲೆ ನಿರಾಶ್ರಿತರ ಪರಿಹಾರದ ಕುರಿತು ಚರ್ಚಿಸಲು ಸಂಸದ ಅನಂತಕುಮಾರ ಹೆಗಡೆ ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗ ನ್ಯಾಯಯುತವಾಗಿ ಸಿಗಬೇಕಾದ ಪರಿಹಾರದಿಂದ ಇಲ್ಲಿನ ಜನ 30 ವರ್ಷಗಳ ಕಾಲ ವಂಚಿತರಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿ ತಕ್ಷಣ 600 ಕೋಟಿ ರೂಪಾಯಿ ಪರಿಹಾರವನ್ನು ಸಚಿವೆ ನಿರ್ಮಲಾ ಸೀತಾರಾಮ್ ಅವರ ಮೂಲಕ ವಿತರಿಸಲು ಕ್ರಮ ಕೈಗೊಂಡರು ಇಂಥ ಮಹಾನ್ ನಾಯಕರು ನಮ್ಮ ಆದರ್ಶ ಎಂದು ಶಾಸಕಿ ರೂಪಾಲಿ ನಾಯ್ಕ ಅವರು ತಿಳಿಸಿದರು.