ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಷದ ಶಿಸ್ತು ಯಾರೂ ಉಲ್ಲಂಘನೆ ಮಾಡಬಾರದು. ಯಾರೇ ಉಲ್ಲಂಘಿಸಿದರೂ ನೋಟಿಸ್ ಕೊಡೋದು ಫಿಕ್ಸ್ ಎಂದು ಡಿಕೆ ಶಿವಕುಮಾರ್ ಶಾಸಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ನೋಟಿಸ್ ಜಾರಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಕ್ಬಾಲ್ ಹುಸೇನ್‌ಗೂ ನೋಟಿಸ್ ಕೊಡ್ತೀನಿ, ಬೇರೆ ಅವರಿಗೂ ನೋಟಿಸ್ ಕೊಡಬೇಕಾಗುತ್ತದೆ. ಪಕ್ಷದ ಶಿಸ್ತು ಯಾರೂ ಉಲ್ಲಂಘನೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಪಕ್ಷಕ್ಕೆ ಎಲ್ಲರೂ ಕಷ್ಟಪಟ್ಟಿದ್ದಾರೆ. ನನ್ನಂತ ನೂರಾರು ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ. ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ? ಮೊದಲು ನಾವು ಅವರ ಬಗ್ಗೆ ಯೋಚನೆ ಮಾಡಬೇಕು ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.