ತಿರುಪತಿ ಆಸ್ಪತ್ರೆಯಲ್ಲಿ ಮಕ್ಕಳ ಮರಣ ಮೃದಂಗ, ವಾರದಲ್ಲಿ 9 ಶಿಶುಗಳ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಿರುಪತಿ ಹೆರಿಗೆ ಆಸ್ಪತ್ರೆಯಲ್ಲಿ ಶಿಶು ಮರಣ ಪ್ರಮಾಣ ಹೆಚ್ಚುತ್ತಿದೆ.ಒಂಭತ್ತು ತಿಂಗಳಿಂದ ಕಟ್ಟಿಕೊಂಡಿರುವ ಕನಸು ಒಮ್ಮೆಲೆ ಭಗ್ನವಾದಂತಿದೆ ಹತ್ತವರಿಗೆ. ಮಕ್ಕಳ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಆಸ್ಪತ್ರೆಗೆ ಗರ್ಭಿಣಿಯರು, ಪುಟ್ಟ ಮಕ್ಕಳನ್ನು ಕರೆತರಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಕೇವಲ ಒಂದು ವಾರದಲ್ಲಿ ಒಂಬತ್ತು ಶಿಶುಗಳು ಸಾವನ್ನಪ್ಪಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದಲ್ಲ ಎರಡಲ್ಲ.. ತಿರುಪತಿ ಹೆರಿಗೆ ಆಸ್ಪತ್ರೆಯೊಂದರಲ್ಲೇ 14 ಶಿಶುಗಳು ಸಾವನ್ನಪ್ಪಿವೆ. ಒಂದು ವಾರದಿಂದ 9 ಮಕ್ಕಳು ಸಾವನ್ನಪ್ಪಿರುವ ಸುದ್ದಿ ಕೇಳಿ ಕುಟುಂಬ ಕಲ್ಯಾಣ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಶಿಶು ಮರಣಗಳ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಮತ್ತೊಂದೆಡೆ ರುಯಾ ಮಕ್ಕಳ ಆಸ್ಪತ್ರೆಯಲ್ಲಿಯೂ ಶಿಶು ಮರಣ ಪ್ರಮಾಣ ಮುಂದುವರೆದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡೂ ಆಸ್ಪತ್ರೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಶಿಶು ಮರಣಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆರಪಗಳು ಕೇಳಿಬರುತ್ತಿವೆ. ಘಟನೆ ಬಗ್ಗೆ ಕುಟುಂಬ ಕಲ್ಯಾಣ ಆಯುಕ್ತ ಅನಿಲ್ ವಿಚಾರಣೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!