ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪರ್ಣಾ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.
“ಪ್ರಸಿದ್ಧ ನಿರೂಪಕಿ ಮತ್ತು ನಟಿ ಶ್ರೀಮತಿ ಅಪರ್ಣಾ ಅವರು ಶುದ್ಧ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದವರು ಇಂದು ಅವರ ಅಗಲಿಕೆ ತುಂಬಾ ನೋವು ತಂದಿದೆ. ಅವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ. ದಶಕಗಳಿಂದ ನಿರೂಪಕಿಯಾಗಿ, ನಟಿಯಾಗಿ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು” ಎಂದು ಪೋಸ್ಟ್ ಮಾಡಿದ್ದಾರೆ.
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ… pic.twitter.com/EI2DBga1DW
— DK Shivakumar (@DKShivakumar) July 11, 2024