ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನನ್ನ ಬಿಟ್ಟರೆ ಬಿಜೆಪಿಯಲ್ಲಿ ಸಮರ್ಥರು ಯಾರಿದ್ದಾರೆ: ಪ್ರತಾಪ್ ಸಿಂಹ ಪ್ರಶ್ನೆ

ಹೊಸ ದಿಗಂತ ವರದಿ , ಮಡಿಕೇರಿ:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ನನ್ನನ್ನು ಬಿಟ್ಟರ ಸಮರ್ಥರು ಯಾರಿದ್ದಾರೆ ಎಂದು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ನಾಡಪ್ರಭು ಕೇಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ನಾನೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಈಗಾಗಲೇ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ .ಇನ್ನೂ ಹಲವು ಯೋಜನೆಗಳು ಪ್ರಗತಿಯಲ್ಲಿವೆ ಎಂದು ಅವರು ನುಡಿದರು.

ಅಭಿವೃದ್ಧಿಯನ್ನು ಚಿಂತನೆಯಲ್ಲಿಟ್ಟು, ಮುಂದಿನ ದಿನಗಳಲ್ಲಿ ನನ್ನನ್ನು ಮತದಾರ ಪ್ರಭುಗಳು ಆಶೀರ್ವದಿಸಲಿದ್ದಾರೆ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.  ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಈ ಸಂದರ್ಭ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!