May 26, 2026
Tuesday, May 26, 2026
spot_img

ಅಕ್ರಮ ಮದ್ಯ ಮಾರಾಟ ಜಾಲದ ಮೇಲೆ ಎಪಿಎಂಸಿ ಪೊಲೀಸರ ದಾಳಿ: ಇಬ್ಬರು ಅರೆಸ್ಟ್

ಹೊಸದಿಗಂತ ಬೆಳಗಾವಿ:

ನಗರದ ಸಾರ್ವಜನಿಕ ಸ್ಥಳಗಳಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ಎಪಿಎಂಸಿ ಠಾಣೆಯ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾವಿರಾರು ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ನಗರದ ಸಾರ್ವಜನಿಕ ಪ್ರದೇಶವೊಂದರಲ್ಲಿ ದಾಳಿ ನಡೆಸಿದರು. ಈ ವೇಳೆ ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಗೌತಮ ಕಲ್ಲಪ್ಪ ಕಲಕಾಂಬಕರ (24) ಮತ್ತು ಸತೀಶ ಯಲ್ಲಪ್ಪ ಚೌಗಲಾ (29) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಸುಮಾರು 20,326 ರೂ. ಮೌಲ್ಯದ ವಿವಿಧ ಬ್ರ್ಯಾಂಡ್‌ಗಳ ಅಕ್ರಮ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಾರ್ವಜನಿಕ ಶಾಂತಿ ಕದಡುವ ಮತ್ತು ಸರ್ಕಾರದ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 75/2026 ರಡಿ, ಅಬಕಾರಿ ಕಾಯ್ದೆ 1965ರ ಕಲಂ 32 ಮತ್ತು 34 ರ ಪ್ರಕಾರ ಕೇಸ್ ದಾಖಲಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !