Sunday, August 14, 2022

Latest Posts

ಹೆಚ್ಚುವರಿ ಲಸಿಕೆ ತರಿಸಿಕೊಳ್ಳಲು ಶಾಸಕ ಅಪ್ಪಚ್ಚುರಂಜನ್ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಭೇಟಿ ನೀಡಿದರಲ್ಲದೆ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್-19 ನಿರೋಧಕ ಲಸಿಕೆ ನೀಡಬೇಕು. ಆ ದಿಸೆಯಲ್ಲಿ ಹೆಚ್ಚುವರಿ ಲಸಿಕೆ ತರಿಸಿಕೊಳ್ಳಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಲಸಿಕೆ ಬಂದ ಸಂದರ್ಭದಲ್ಲಿ ಒಂದು ದಿನದಲ್ಲಿ ಇಷ್ಟು ಮಂದಿಗೆ ಮಾತ್ರ ಎಂದು ಟೋಕನ್ ನೀಡಬೇಕು. ಅದನ್ನು ಬಿಟ್ಟು ಯಾರನ್ನೂ ಸಹ ಕಾಯಿಸಬಾರದು ಎಂದು ಶಾಸಕರು ಸೂಚಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ಸುಮಾರು 2.20 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್-19 ನಿರೋಧಕ ಲಸಿಕೆ ನೀಡಲಾಗಿದೆ. ಹಂತ ಹಂತವಾಗಿ ಲಸಿಕೆ ನೀಡಲಾಗುತ್ತದೆ. ಸದ್ಯ ಎರಡನೇ ಬಾರಿಗೆ ನೀಡಬೇಕಿರುವವರಿಗೆ ಲಸಿಕೆಯನ್ನು ಆದ್ಯತೆ ಮೇಲೆ ನೀಡಲಾಗುತ್ತದೆ, ಹಾಗೆಯೇ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕಿದೆ ಎಂದು ಶಾಸಕರು ಹೇಳಿದರು.
ವೈದ್ಯರು ಯಾವುದೇ ರೀತಿಯ ದೂರು ಬರದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಗಮನಹರಿಸಬೇಕು ಎಂದು ಶಾಸಕರು ಸಲಹೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss