ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಮತ್ತೆ ಮೇಘಸ್ಫೋಟ: ಆತಂಕದಲ್ಲಿ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ.

ಉತ್ತರ ಕಾಶ್ಮೀರದ ಕುಪ್ವಾರಾದ ವಾರ್ನೋ ಅರಣ್ಯ ಪ್ರದೇಶದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ. ಅದೃಷ್ಟವಶಾತ್‌ ಈವರೆಗೆ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. 5 ದಿನಗಳಲ್ಲಿ ಇದು 3ನೇ ದುರಂತವಾಗಿದೆ.

ಒಂದು ದಿನದ ಹಿಂದಷ್ಟೇ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಐವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.ಇದಕ್ಕೂ ಮುನ್ನ ಕಳೆದ ಗುರುವಾರ ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯ ಚಶೋತಿ ಗ್ರಾಮದಲ್ಲಿ ಉಂಟಾದ ಮೇಘಸ್ಫೋಟದಿಂದ 65 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!