ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣು ಅಳಿಯ ಅನಿರುದ್ಧ್ ಮನವಿ ಮಾಡಿದ್ದಾರೆ.
ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಅವರ 75ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ, ಇದು ಅವರ ಅಪಾರ ಅಭಿಮಾನಿಗಳ ಆಕಾಂಕ್ಷೆ ಎಂದು ಅನಿರುದ್ಧ್ ಮನವಿ ಮಾಡಿದ್ದಾರೆ.
ಚಲನಚಿತ್ರ ರಂಗ, ಕಲಾರಂಗಕ್ಕೆ ವಿಷ್ಣು ಅವರ ಕೊಡುಗೆ ಅಪಾರ. ಇನ್ನೂ ಅವರಿಗೆ ಕೇಂದ್ರದಿಂದಲೂ ಪದ್ಮಶ್ರೀ ಪ್ರಶಸ್ತಿ ಕೊಟ್ಟಿಲ್ಲ. ಕರ್ನಾಟಕ ಸರ್ಕಾರದಿಂದಲೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿಲ್ಲ. ಹೀಗಾಗಿ, ಅವರ 75ನೇ ವರ್ಷದ ವಿಶೇಷ ಸಂದರ್ಭದಲ್ಲಾದರೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವಂತೆ ಮನವಿ ಮಾಡಿದ್ದಾರೆ.