Tuesday, August 16, 2022

Latest Posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಜಿಲ್ಲಾಧಿಕಾರಿಗೆ ಮನವಿ

ಹೊಸ ದಿಗಂತ ವರದಿ, ಮಡಿಕೇರಿ:

ರಾಜ್ಯದಲ್ಲಿ ಸಮಗ್ರ ಬಾಲವಿಕಾಸ ಯೋಜನೆಯಡಿ ಕೆಲಸ ಮಾಡುತ್ತಿದ್ದ ಹಾಗೂ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು
ಮತ್ತು ಸಹಾಯಕಿಯರಿಗೆ ನಿವೃತ್ತಿ ವೇತನ ಘೋಷಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಸಂಘ ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಂಘದ ಪ್ರಮುಖರು, ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸಂಕಷ್ಟದ ಜೀವನ ಸಾಗಿಸುತ್ತಿದ್ದು, ನಿವೃತ್ತಿಯಾದ ಸಿಬ್ಬಂದಿಗಳಿಗೆ ಸರ್ಕಾರ ಕೂಡಲೇ ಪಿಂಚಣಿ ಹಾಗೂ ವೈದ್ಯಕೀಯ ಸವಲತ್ತನ್ನು ಜಾರಿಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಜೆಟ್‍ನಲ್ಲಿ ವೇತನ ಹೆಚ್ಚಳ ಮಾಡಬೇಕು, ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಡುಗಂಟು ಹಾಗೂ ನಿವೃತ್ತಿ ವೇತನವನ್ನು ಕೂಡಲೇ ನೀಡಬೇಕೆಂದು ಒತ್ತಾಯಿಸಿದರು.
ಮಾತೃಪೂರ್ಣ ಯೋಜನೆಯ ಬಗ್ಗೆ ಸರ್ಕಾರ ಸಮಗ್ರವಾಗಿ ಅಧ್ಯಯನ ನಡೆಸಿ ಫಲಾನುಭವಿಗಳ ಹಿತದೃಷ್ಟಿಯಿಂದ ಚಾಲ್ತಿಯಲ್ಲಿದ್ದ ಟೇಕ್‍ಹೋಂ ಅನ್ನು ಗರ್ಭಿಣಿ ಹಾಗೂ ಬಾಣಂತಿಯರಿಗೆ ವಿತರಿಸಬೇಕು ಅಥವಾ ಆ ಫಲಾನುಭವಿಗಳಿಗೆ ಹಣ ಜಮಾ ಮಾಡಬೇಕೆಂದರು.
ಕೋವಿಡ್ ಸಂದರ್ಭ ಆಶಾ ಕಾರ್ಯಕರ್ತರಂತೆ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಕೂಡ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕಾರ್ಯನಿರ್ವಹಿಸಿದ್ದಾರೆ. ಆದರೆ ಇಲ್ಲಿಯವರೆಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರ ಗುರುತಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.
ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ನೀಡುತ್ತಿರುವ ಸಮವಸ್ತ್ರ ಕಳಪೆ ಮಟ್ಟದಿಂದ ಕೂಡಿದ್ದು, ಕಳಪೆ ಮಟ್ಟದ ಸಮವಸ್ತ್ರವನ್ನು ವಾಪಸ್ ಪಡೆಯಬೇಕು ಮತ್ತು ರಾಜ್ಯದ ಎಲ್ಲಾ ಸಮಗ್ರ ಬಾಲ ವಿಕಾಸ ಯೋಜನೆಯಲ್ಲಿ ಕಳೆದ ಐದು ವರ್ಷ ವರ್ಷಕ್ಕೆ ಮೇಲ್ಪಟ್ಟು ಕೆಲಸ ಮಾಡುತ್ತಿರುವ ಎಲ್ಲಾ ಮೇಲ್ವಿಚಾರಕಿಯರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.
ಮನವಿ ನೀಡುವ ಸಂದರ್ಭ ಸಂಘದ ಮಡಿಕೇರಿ ತಾಲೂಕು ಕಾರ್ಯದರ್ಶಿ ಐ.ಎ.ಅಕ್ಕಮ್ಮ, ನಿವೃತ್ತ ಕಾರ್ಯಕರ್ತೆ ಕೆ.ಎ.ಕಸ್ತೂರಿ, ಅಂಗನವಾಡಿ ಕಾರ್ಯಕರ್ತೆ ಪವಿತ್ರ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss