ಮಗಳೊಂದಿಗೆ ಕಾಣಿಸಿಕೊಂಡ ಧ್ರುವ ಸರ್ಜಾ ಪತ್ನಿ ಪ್ರೇರಣಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧ್ರುವ ಹಾಗೂ ಪ್ರೇರಣಾ ದಂಪತಿಗೆ ನಾಲ್ಕೂವರೆ ತಿಂಗಳ ಹಿಂದೆ ಹೆಣ್ಣು ಮಗುವಿನ ಜನನ ಆಗಿತ್ತು. ಅಂದಿನಿಂದ ಇಬ್ಬರಲ್ಲೂ ಸಂತಸವೇ ಮನೆ ಮಾಡಿದೆ. ಧ್ರುವ ಸರ್ಜಾ ಹಾಗೂ ಪ್ರೇರಣಾ, ಮನೆಗೆ ಮಹಾಲಕ್ಷ್ಮಿ ಬಂದ ಸಂತಸದಲ್ಲಿದ್ದರು. ಆದರೆ, ಎಂದಿಗೂ ಮಗಳೊಂದಿಗೆ ಕಾಣಿಸಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಧ್ರುವ ಪತ್ನಿ ಪ್ರೇರಣಾ ಮಗಳೊಂದಿಗೆ ಕಾಣಿಸಿಕೊಂಡಿದ್ದಾರೆ.

ಮಗಳೊಂದಿಗೆ ಕಾಣಿಸಿಕೊಂಡ ಪ್ರೇರಣಾ ಸರ್ಜಾ

ಧ್ರುವ ಸರ್ಜಾ ಪತ್ನಿ ಪ್ರೇರಣಾ ಸರ್ಜಾ ಇನ್‌ಸ್ಟಾಗ್ರಾಂನಲ್ಲಿ ಮಗುವಿನೊಂದಿಗಿರುವ ಫೋಟೊ ಶೇರ್ ಮಾಡಿಕೊಂಡಿದ್ದರು. ಆ ಫೋಟೊ ಈಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದು ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಖುಷಿ ಕೊಟ್ಟಿದೆ. ಆದರೆ, ಈ ಬಾರಿಗೂ ಮಗುವಿನ ಮುಖವನ್ನು ತೋರಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!