ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂವರ ಹೆಸರನ್ನು ಶಿಫಾರಸು ಮಾಡಲು ಅವಕಾಶ ಒದಗಿಸಲಾಗಿದೆ. ಸಾಧಕರು ಹೆಸರು, ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಊರು, ವಿಳಾಸ, ಸಂಪರ್ಕ ಸಂಖ್ಯೆ ಇತ್ಯಾದಿ ವಿವರ ಒದಗಿಸಲು ಅರ್ಜಿ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಬರುವ ಶಿಫಾರಸು ತಜ್ಞರ ಸಮಿತಿಗೆ ಹಸ್ತಾಂತರವಾಗಲಿದೆ. ಕ್ರೀಡೆ ಹೊರತುಪಡಿಸಿ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು. ಸಾರ್ವಜನಿಕರು ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಪುಟದಲ್ಲಿ ಶಿಫಾರಸು ಮಾಡಬಹುದು. ಶಿಫಾರಸು ಮಾಡಿದ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ಅವಕಾಶ ಒದಗಿಸಲಾಗಿದೆ.