ಕಾರ್ಮಿಕ ಇಲಾಖೆ ವತಿಯಿಂದ ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲು ಅರ್ಜಿ ಅಹ್ವಾನಿಸಲಾಗಿದೆ.

ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು, ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯ ಪಡೆಯಲು ಅರ್ಜಿ ನಮೂನೆಯನ್ನು ಆಯಾ ವೃತ್ತ ಕಛೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸ್ವೀಕರಿಸಿದ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!