ಹೊಸದಿಗಂತ ಡಿಜಿಟಲ್ ಡೆಸ್ಕ್:
2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್ಎಟಿಎಸ್ (SATS ID ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.15 ಕೊನೆಯ ದಿನವಾಗಿರುತ್ತದೆ.