ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳ ಮಹಾಪೂರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನ ವ್ಯಕ್ತವಾಗಿದ್ದು, ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ರಾಜ್ಯ ಸರಕಾರವು ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ’ ಎಂದಿದ್ದಾರೆ.

ಅಲ್ಲದೆ, ಅರ್ಜಿ ಹಾಕಿಕೊಳ್ಳಲು ಶುಕ್ರವಾರ ಮಧ್ಯರಾತ್ರಿ 12 ಗಂಟೆಯವರೆಗೂ ಅವಕಾಶವಿದೆ. ಇದುವರೆಗೂ ಅರ್ಜಿ ಹಾಕದೆ ಇರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂಥವರು https://dec.karnataka/gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಸರಕಾರವು ಕಳೆದ ವಾರ ಅತಿಥಿ ಉಪನ್ಯಾಸಕರ ವೇತನವನ್ನು ಗರಿಷ್ಠ ₹ 32 ಸಾವಿರದವರೆಗೂ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದನ್ನು ಇಲ್ಲಿ ನೆನೆಯಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!