ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗಮದ ಅಂತರಜಾಲ https://kmdconline.karnataka.gov.in ದ ಮೂಲಕ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಜುಲೈ 10, 2023ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್ ಪರಿಕ್ಷೆಗಳ ಮೂಲಕ ಆಯ್ಕೆಗೊಂಡ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇತರೆ ವೈದ್ಯಕೀಯ ಸಂಬಂದಿಸಿದ ಕೋರ್ಸ್‍ಗಳಿಗೆ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ವಿದ್ಯಾಭ್ಯಾಸ (ಫ್ರೆಶ್) ಯೋಜನೆಯಡಿಯಲ್ಲಿ ಸಾಲ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರವರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಧಾರವಾಡ ಮೌಲಾನಾ ಆಝಾದ ಭವನ, ಸರ್ಕಾರಿ ಮುದ್ರಣಾಲಯದ ಹತ್ತಿರ, ಸಾಧನಕೇರಿ ರಸ್ತೆ, ಧಾರವಾಡ-580008, ದೂರವಾಣಿ ಸಂಖ್ಯೆ: 0836-2748226 ಸಂಪರ್ಕಿಸಲು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!