ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನ ಜೆಎಸ್‌ಎಸ್ ವಿದ್ಯಾಪೀಠದ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನಲ್ಲಿ 2023-24ನೇ ಸಾಲಿಗೆ ಮೂರು
ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸ್‌ಗಳಾದ ಅರ್ಕಿಟೆಕ್ಚರ್ ಅಸಿಸ್ಟೆಂಟ್‌ಶಿಪ್, ಕಮರ್ಶಿಯಲ್ ಪ್ರ್ಯಾಕ್ಟಿಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಅನುದಾನ ರಹಿತ ಕೋರ್ಸ್‌ಗಳಾದ ಜ್ಯುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಶನ್ (ಅಂಧರಿಗೆ) ಮತ್ತು ಅಪಾರೆಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿಯನ್ನು ಕಲಿಸಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35 ಅಂಕಗಳೊಂದಿಗೆ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಉಪಪ್ರಾಂಶುಪಾಲ ಎನ್.ಎಂ.ಶಿವಕುಮಾರ ಸ್ವಾಮಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶೇ.40 ಮತ್ತು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ, 60 ಡಿಬಿ ಮತ್ತು ಮೇಲ್ಪಟ್ಟು ಕಿವುಡ ಮತ್ತು ಮೂಗ ಅಂಗವಿಕಲತೆ, 6/60 ಅಥವಾ 20/200 ಸ್ನೆಲೆನ್ ಭಾಗಶಃ ಮತ್ತು ಪೂರ್ಣ ಅಂಧತ್ವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿದ್ಯಾರ್ಥಿ ವೇತನ ದೊರೆಯುತ್ತಿದೆ. ಈ ಮೂಲಕ ಶಾಲಾ ಶುಲ್ಕ ಉಚಿತವಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಉದ್ಯೋಗವಾಕಾಶ ಕಲ್ಪಿಸಿಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ www.jsspda.org  , ದೂ. 9844644937 ಸಂಪರ್ಕಿಸಬಹುದು. ಅರ್ಜಿಯನ್ನು ಸಂಸ್ಥೆಯಿಂದ ಪಡೆಯಬಹುದು ಅಥವಾ ಸಂಸ್ಥೆಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೆ ಜೂ.17ಕೊನೆಯ ದಿನ ಎಂದು ತಿಳಿಸಿದರು.
ಕನ್ನಡ ಪ್ರಾಧ್ಯಾಪಕ ಡಾ. ಪಳನಿಸ್ವಾಮಿ, ಮಹೇಶ್ ಕೆ.ಎಸ್., ಎಚ್.ಆರ್.ಬಸವರಾಜ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!