ಹೊಸದಿಗಂತ ಡಿಜಿಟಲ್ ಡೆಸ್ಕ್:
2013ರಲ್ಲಿ ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಕ್ರಮದ ಹಿಂದಿನ ಉದ್ದೇಶ ತುಷ್ಟೀಕರಣ ರಾಜಕೀಯದ ಮೂಲಕ ಚುನಾವಣೆಗಳನ್ನು ಗೆಲ್ಲುವುದಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
“ನಿಮಗೆ ಮುಸ್ಲಿಮರ ಬಗ್ಗೆ ಅಷ್ಟೊಂದು ಸಹಾನುಭೂತಿಯಿದ್ದರೆ, ಮುಸ್ಲಿಮರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಏಕೆ ಮಾಡಬಾರದು? ಚುನಾವಣೆಯಲ್ಲಿ ಮುಸ್ಲಿಮರಿಗೆ ಶೇ. 50ರಷ್ಟು ಸ್ಥಾನಗಳನ್ನು ನೀಡಿ” ಎಂದು ಪ್ರಧಾನಿ ಮೋದಿ ಸವಾಲು ಹಾಕಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದ ನಂತರ ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.