ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನ ಸಿದ್ದಗಂಗಾ ಮಠದ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ ಶಿಷ್ಯ ಮನೋಜ್ ಕುಮಾರ್ ಅವರನ್ನು ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಅವರು ಅಕ್ಷಯ ತೃತೀಯ ದಿನ ಏ.23ರ ಭಾನುವಾರ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಮಾಡಲಾಗುವುದು ಎಂದು ಮಠದ ಕಾರ್ಯದರ್ಶಿ ತಿಳಿಸಿದ್ದಾರೆ.
ವಿಶ್ವವ್ಯಾಪಿ ತ್ರಿವಿಧ ದಾಸೋಹಿ ಮಠವೆಂದೇ ಪ್ರಸಿದ್ಧಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಉತ್ತರಾಧಿಕಾರಿಯಾಗಿ ಸಿದ್ದಲಿಂಗ ಸ್ವಾಮೀಜಿ ಆಡಳಿತ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಶಿಷ್ಯ ಮನೋಜ್ ಕುಮಾರ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇವರನ್ನು ಅಕ್ಷಯ ತೃತೀಯ ದಿನ ಏ.23ರ ಭಾನುವಾರ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಮಾಡಲಾಗುವುದು ಎಂದು ಮಠದ ಕಾರ್ಯದರ್ಶಿ ತಿಳಿಸಿದ್ದಾರೆ.
ಸಿದ್ದಗಂಗಾ ಮಠ ಮತ್ತು ಶಾಖಾ ಮಠಗಳ ಉತ್ತರಾಧಿಕಾರಿಗಳು:
ತುಮಕೂರು ನಗರದ ಸಿದ್ದಗಂಗಾ ಮಠದ ಉತ್ತರಾಧಿಕಾರಿ: ಮನೋಜ್ ಕುಮಾರ್
ಮಾಗಡಿಯ ಶ್ರೀ ಕಂಚುಗಲ್ ಬಂಡೇಮಠ : ಹರ್ಷ ಕೆ.ಎಂ
ದೇವನಹಳ್ಳಿ ತಾಲೂಕಿನ ಬಸವಕಲ್ಯಾಣ ಮಠ : ಗೌರೀಶ್ ಕುಮಾರ್
ಸಿದ್ದಗಂಗಾ ಮಠದ ಉತ್ತರಾಧಿಕಾರಿ ವಿವರ:
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಗ್ರಾಮದ ಎಂ.ಬಿ. ಷಡಕ್ಷರಯ್ಯ- ವಿರುಪಾಕ್ಷಮ್ಮ ದಂಪತಿಯ ಪುತ್ರರಾದ ಮನೋಜ್ ಕುಮಾರ್ ಅವರು ಈಗ ಸಿದ್ದಗಂಗಾ ಮಠದ ಉತ್ತರಾಧಿಕಾರಿ ಆಗಿ ಆಯ್ಕೆ ಆಗಿದ್ದಾರೆ. ಇವರು 1987ರ ಜೂ.2ರಂದು ಜನಿಸಿದ್ದು, ಬಿಎಸ್‌ಸಿ, ಬಿಎಡ್ ಹಾಗೂ ಎಂಎ ಪದವಿಯನ್ನು ಪಡೆದಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.