Saturday, April 1, 2023

Latest Posts

ದತ್ತಪೀಠಕ್ಕೆ ಅರ್ಚಕರ ನೇಮಕ: ಹಿಂದು ಸಂಘಟನೆಗಳಲ್ಲಿ ಮನೆಮಾಡಿದ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದುಗಳಿಗೆ ಅವಕಾಶ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಅರ್ಚಕರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು.

ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.

ಇನಾಂ ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕವಾಗಿದ್ದು. ವಿಎಚ್​ಪಿ, ಬಜರಂಗದಳ ಸಂಭ್ರಮಾಚರಣೆ ನಡೆಸಿವೆ. ನಗರದ ಆಜಾದ್ ಪಾರ್ಕ್​ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಎಚ್​ಪಿ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!