ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಮತ್ತೆ ವಿಚಾರಣೆಗೆ ಹೈಕೋರ್ಟ್​ ಒಪ್ಪಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಸರ್ಕಾರ ಈಗಾಗಲೇ ನೇಮಿಸಿದ್ದು, ಇದನ್ನು ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಇದೀಗ ಡಿಸೆಂಬರ್​ 16 2022ರಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು ಲಿಖಿತ ವಾದಾಂಶದಲ್ಲಿ ಹೊಸ‌ ಅಂಶ‌ ಪ್ರಸ್ತಾಪ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಲು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಪೀಠ ನಿರ್ಧರಿಸಿದೆ.

3 ದಿನಗಳಲ್ಲಿ ರಿಟ್ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಸೂಚನೆ‌ ನೀಡಿದೆ. ಹೈಕೋರ್ಟ್ ಮತ್ತೆ ವಿಚಾರಣೆಯನ್ನು ಜನವರಿ 12ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಹಿಂದು ಕಾನೂನಿನಡಿ ಮಠಾಧಿಪತಿಗಳ ಅಧಿಕಾರ ವ್ಯಾಪ್ತಿ ಹಾಗೂ ಇತ್ಯಾದಿಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲು ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!