ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಪ್ರಭಾವಿ ಸಚಿವರ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನಾಗಿ ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಣಕಾಸು ಸಚಿವ ಕೃಷ್ಣಭೈರೇಗೌಡ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ಕಾಲಕಾಲಕ್ಕೆ ದಾಖಲೆ ಹಾಗೂ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!