ಹೊಸದಿಗಂತ ವರದಿ, ಮಂಗಳೂರು:
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾಗಿರುವ ವಿ.ಸುನಿಲ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸರಕಾರ ನೇಮಕ ಮಾಡಿದೆ. ಅದೇ ರೀತಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಎಸ್.ಅಂಗಾರ ಅವರನ್ನು ನೇಮಕ ಮಾಡಲಾಗಿದೆ.
ನೂತನ ಸಚಿವ ಸಂಪುಟ ಪುನರ್‌ರಚನೆಯಾದ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕವಾಗಿರಲಿಲ್ಲ. ಇದೀಗ ಉಸ್ತುವಾರಿಗಳ ನೇಮಕವಾಗಿದೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಈ ಸಚಿವರುಗಳಿಗೆ ಕೋವಿಡ್ ಉಸ್ತುವಾರಿ ಜವಾಬ್ಧಾರಿಯನ್ನೂ ವಹಿಸಲಾಗಿದೆ.