Saturday, August 13, 2022

Latest Posts

ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಕನ್ನಡೇತರರ ನೇಮಕ: ಕನ್ನಡ ಅಧ್ಯಾಪಕರಿಂದ ಧರಣಿ ಸತ್ಯಾಗ್ರಹ

ಹೊಸದಿಗಂತ ವರದಿ, ಕಾಸರಗೋಡು:
ಕಾಸರಗೋಡು ಶೈಕ್ಷಣಿಕ ಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಕನ್ನಡೇತರರನ್ನು ನೇಮಿಸಿದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯು ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಿತು.
ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿ ಮುಂದೆ ನಡೆದ ಈ ಪ್ರತಿಭಟನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್ ಕಾಸರಗೋಡು ಕನ್ನಡ ಅಧ್ಯಾಪಕರಿಗೆ ಆಗುತ್ತಿರುವ ಅನ್ಯಾಯಗಳ ಕುರಿತಾಗಿ ಮಾತನಾಡಿದರು.
ಕನ್ನಡ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರಾವ್, ಹೋರಾಟ ಸಮಿತಿಯ ಕಾರ್ಯದರ್ಶಿ ಕೆ.ಭಾಸ್ಕರ ಕಾಸರಗೋಡು, ಕೇಂದ್ರ ಸಮಿತಿಯ ಅಧಿಕೃತ ವಕ್ತಾರ ರವೀಂದ್ರನಾಥ ಕೆ.ಆರ್. ಅವರು ಮಾತನಾಡಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ, ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ಬಾಬು ಕೆ., ಕೇಂದ್ರ ಸಮಿತಿಯ ಕೋಶಾಧಿಕಾರಿ ಪದ್ಮಾವತಿ ಎಂ. ಸೇರಿದಂತೆ ಹಲವಾರು ಮಂದಿ ಪ್ರತಿಬಟನೆಯಲ್ಲಿ ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss