March 6, 2026
Friday, March 6, 2026
spot_img

ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ ಸುರಂಗಮಾರ್ಗ ನಿರ್ಮಾಣಕ್ಕೆ ಅನುಮೋದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ ಸುರಂಗಮಾರ್ಗ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.

ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗುತ್ತದೆ.

ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್​ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ.

ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್​ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !