ರಾಜ್ಯ ಬಜೆಟ್| 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್​ಗೆ ಅನುಮೋದನೆ – ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್​ಗೆ ಅನುಮೋದನೆ ನೀಡಿರುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್ (Smart Virtual Clinic ಗಳನ್ನು ಅನುಮೋದಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ. ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಎಂದು ಪುನರ್ ರಚನೆ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!