ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ: ಕಾಲುವೆಗಳ ಕೊನೇ ಭಾಗದ ರೈತರಿಗೆ ಸಿಗಲಿದೆ ನೀರಿನ ಖಾತರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆಯಲ್ಲಿ ಇಂದು ನೀರಾವರಿ ತಿದ್ದುಪಡಿ ಕಾಯ್ದೆ-2024ಕ್ಕೆ ಅನುಮೋದನೆ ನೀಡಲಾಯಿತು.

ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.

ಈ ವೇಳೆ ಮಾತನಾಡಿದ ಅವರು , 1964 ರಲ್ಲಿ ಈ ವಿಚಾರದ ಬಗ್ಗೆ ಕಾಯ್ದೆ ಮಾಡಲಾಗಿತ್ತು. ನಂತರ ಯಾವುದೇ ತಿದ್ದುಪಡಿಗಳು ಆಗಿರಲಿಲ್ಲ. ಕಾಲುವೆಗಳಿಗೆ ಯಾರೂ ಸಹ ಪಂಪ್‌ಸೆಟ್‌ಗಳನ್ನು ಹಾಕಬಾರದು ಹಾಗೂ ಅಕ್ಕಪಕ್ಕದ ರೈತರು ನೀರು ತೆಗೆಯಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು. ನೀರಾವರಿ ವಿಚಾರದಲ್ಲಿ ನಡೆಯುವ ಅಕ್ರಮಗಳ ತೀರ್ಮಾನಕ್ಕೆ ಸೂಪರಿಡೆಂಟ್ ಎಂಜಿನಿಯರ್‌ಗೆ ಹಕ್ಕು ನೀಡಲಾಗಿದೆ. ಪ್ರತಿಪಕ್ಷಗಳ ಶಾಸಕರ ಅಭಿಪ್ರಾಯಗಳನ್ನೂ ಸ್ವೀಕರಿಸಲಾಗಿದೆ. ರೈತರಿಗೆ ನೀರು ಕೊಡುವ ನಾಲೆಗಳ ರಕ್ಷಣೆಗೆ ಈ ಕಾನೂನು ತರಲಾಗಿದೆ ಎಂದು ತಿಳಿಸಿದರು.

ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ಈ ಕಾನೂನು ತರಲಾಗಿದೆ ಎಂದು ತಿಳಿಸಿದರು.

ವಿಧೇಯಕ ಮಂಡನೆ ಬಳಿಕ ಸ್ಪೀಕರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿ ಅನುಮೋದನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!