ಬರೋಬ್ಬರಿ 2,500 ಕೆ.ಜಿ. ತೂಕದ ಗೋಮಾಂಸ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈ ಉಪನಗರ ಡಿಯೋನಾರ್‌ನಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 2,500 ಕೆ.ಜಿ.ಗೂ ಅಧಿಕ ಪ್ರಮಾಣದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ.

ಪ್ರಾಣಿ ದಯಾ ಸಂಘಟನೆ ನೀಡಿದ ಸುಳಿವಿನ ಆಧಾರದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಮಾಲೆಗಾಂವ್ ನಿಂದ‌ ಈ ಮಾಂಸವನ್ನು ಶಫೀಕ್ ತಾಡಾ ಎಂಬಾತನ ನೆರವಿನಿಂದ ತರಲಾಗಿದೆ, ಸಾಜಿದ್ ಖುರೇಷಿ ಎಂಬ ವ್ಯಕ್ತಿಗೆ ತಲುಪಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಶಪಡಿಸಿಕೊಂಡ ಗೋಮಾಂಸದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!