ಏಪ್ರಿಲ್ 21ರಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಖ್ ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮದಿನಾಚರಣೆ ನಿಮಿತ್ತ ಏಪ್ರಿಲ್ 21ರಂದು ಪ್ರಧಾನಿ ಮೋದಿ ಕೆಂಪು ಕೋಟೆಯ ಮೇಲಿನಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ.
ಇದೇ ಪಿಎಂ ಮೋದಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಿದ್ದಾರೆ.
ಏಪ್ರಿಲ್ 21ರಂದು ಕೆಂಪು ಕೋಟೆಯಲ್ಲಿ ಸಿಖ್ ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಸಂದರ್ಭ ಪ್ರಧಾನ ಮಂತ್ರಿಗಳು ಅಂಚೆ ಚೀಟಿ ಮತ್ತು ನಾಣ್ಯವನ್ನ ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ತಿಳಿಸಿದರು.
ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಭಾಗವಹಿಸಲಿದ್ದಾರೆ. ಸಂಸ್ಕೃತಿ ಸಚಿವಾಲಯವು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಿದೆ.
ಈ ಉತ್ಸವದಲ್ಲಿ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಖಂಡದಾದ್ಯಂತ ಮತ್ತು ವಿದೇಶಗಳ ಇತರ ಗಮನಾರ್ಹ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಈ ಸಂದರ್ಭದಲ್ಲಿ 400 ರಾಗಿಗಳಿಂದ ಶಾಬಾದ್ ಕೀರ್ತನೆಯನ್ನು ಪ್ರದರ್ಶಿಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!