ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸೇರ್ಪಡೆಯಾಗಲು ಸಿದ್ದರಾಗಿರುವ
ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಕೆ.ಎಂ.ಶಿವಲಿಂಗೇಗೌಡ ತನ್ನ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರೊಂದಿಗೆ ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ. ಬಳಿಕ ಕಾಂಗ್ರೆಸ್ ಪಕ್ಷ ಸೇರಲು ತಯಾರಿ ನಡೆಸಿದ್ದಾರೆ.