ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ.
ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದ ಆರೋಪವಿದ್ದು, ತನಿಖೆ ನಡೆಸಿದ ಸಿಐಡಿ ಮಾಜಿ ಶಾಸಕ ಡಿ.ಎಸ್.ವೀರಯ್ಯ ಅವರನ್ನು ಬಂಧಿಸಿದೆ.
2021 ರಿಂದ 2023ರ ನಡುವೆ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತಾಗಿ ಹಾಲಿ ವ್ಯವಸ್ಥಾಪಕ ನಿರ್ದೇಶಕರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್ 23ರಂದು ಎಫ್‌ಐಆರ್ ದಾಖಲಾಗಿದ್ದು, ಇದೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.