ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದುಬಾರೆ ಅರಣ್ಯ ಪ್ರದೇಶದ ‘ಕುಶ’ನನ್ನು ಮರಳಿ ಕಾಡಿಗೆ ಬಿಡುವಂತೆ ಅರವಿಂದ ಲಿಂಬಾವಳಿ ಆದೇಶ

ಹೊಸದಿಗಂತ ವರದಿ, ಕೊಡಗು:

ಅರಣ್ಯ ಇಲಾಖೆ ಸೆರೆಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ‘ಕುಶ’ನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ. ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ಅವರು ಬೆಂಗಳೂರು ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಮತ್ತೆ ಸೆರೆ ಹಿಡಿದು ತರಲಾಗಿತ್ತು, ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಅವರು ಸಭೆ ನಡೆಸಿ ಮಾಹಿತಿ ಪಡೆದರು.

ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ. ಕುಶ ಆನೆ ಆರೋಗ್ಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಅಂತಿಮವಾಗಿ ಸಚಿವರು ಕುಶ ಆನೆಗೆ ರೇಡಿಯೋ ಕಾಲರ್ ಅಳವಡಿಸಿ, ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಪ್ರಜ್ಞಾ ಚೌಟ ಅವರಿಂದ 5 ಆನೆ ಮರಿ ಒಳಗೊಂಡಂತೆ ಒಟ್ಟು 7 ಆನೆಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆಯಲು ಸಚಿವರು ಆದೇಶಿಸಿದ್ದಾರೆ.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥ ಸಂಜಯ್ ಮೋಹನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ)ವಿಜಯಕುಮಾರ್ ಗೋಗಿ ಹಾಗೂ ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss