ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೌನಿ ಅಮಾವಾಸ್ಯೆಯಂದು ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿಂದೆ ದೊಡ್ಡ ಸಂಚು ಇದ್ಯಾ ಹೀಗೊಂದು ಶಂಕೆ ಈಗ ಎದ್ದಿದೆ. ಕಾಲ್ತುಳಿತದಲ್ಲಿ ಎಷ್ಟೋ ಮಂದಿ ಪ್ರಾಣಬಿಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಹಿಂದೆ ಯಾರದ್ದೋ ಕೈವಾಡ ಇರಬಹುದಾ ಎನ್ನುವ ಶಂಕೆ ಈಗ ಆರಂಭವಾಗಿದೆ.
ಜನವರಿ 29 ರಂದು ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಈಗ ತನಿಖೆ ಆರಂಭವಾಗಿದೆ. ತನಿಖೆಯ ಭಾಗವಾಗಿ ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಸಕ್ರಿಯವಾಗಿದ್ದ ಸುಮಾರು 16 ಸಾವಿರ ಮೊಬೈಲ್ ಫೋನ್ಗಳನ್ನು ದತ್ತಾಂಶಗಳನ್ನು ವಿಶ್ಲೇಷಣೆ ಮಾಡಲಾಗುತ್ತಿದೆ.
ವಿಶ್ಲೇಷಣೆಯ ಸಂದರ್ಭದಲ್ಲಿ ಬಹುತೇಕ ಮೊಬೈಲ್ ಫೋನ್ಗಳು ಸ್ವಿಚ್ ಆಫ್ ಆಗಿರುವ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಈಗ ತನಿಖಾಧಿಕಾರಿಗಳು ಸ್ವಿಚ್ ಆಫ್ ಆಗಿರುವ ಮೊಬೈಲ್ ಸಂಖ್ಯೆಗಳ ಗ್ರಾಹಕರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.