ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪ್ರಮುಖ ವೇಗಿ ಯಶ್ ದಯಾಳ್ ಈ ಸೀಸನ್ಗೆ ಲಭ್ಯವಿರುವುದಿಲ್ಲ ಎಂದು ಅಧಿಕೃತವಾಗಿ ತಿಳಿಸಲಾಗಿದೆ.
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪ್ರೆಸ್ಮೀಟ್ನಲ್ಲಿ ಈ ಮಾಹಿತಿ ಹೊರಬಂದಿದ್ದು, ವೈಯಕ್ತಿಕ ಕಾರಣಗಳಿಂದ ದಯಾಳ್ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ಮ್ಯಾನೇಜ್ಮೆಂಟ್ ಸ್ಪಷ್ಟಪಡಿಸಿದೆ.
ಇದನ್ನೂ ಓದಿ:
ಬೌಲಿಂಗ್ ವಿಭಾಗದಲ್ಲಿ ಮಹತ್ವದ ಪಾತ್ರ ವಹಿಸಿದ್ದ ದಯಾಳ್ ಗೈರುಹಾಜರಿ ತಂಡದ ಸಮತೋಲನಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಪ್ರಮುಖ ಪಂದ್ಯಗಳ ಮುನ್ನವೇ ಈ ಸುದ್ದಿ ಹೊರಬಿದ್ದಿರುವುದು ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ.
ಮಾರ್ಚ್ 28ರಿಂದ ಟೂರ್ನಿ ಆರಂಭವಾಗಲಿದ್ದು, ದಯಾಳ್ ಬದಲಿಗೆ ಯಾರು ಅವಕಾಶ ಪಡೆಯುತ್ತಾರೆ ಎಂಬುದರ ಮೇಲೆ ಇದೀಗ ಎಲ್ಲರ ಗಮನ ಕೇಂದ್ರೀಕೃತವಾಗಿದೆ.



