ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ -ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ ಎಂದು ನಿರಾಕರಿಸಿರುವುದು ಭಾರೀ ಸುದ್ದಿಯಾಗಿದೆ. ಕಾಂಗ್ರೆಸ್ ನ ಹಲವು ನಾಯಕರು ದಂಪತಿ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ, ನಾವು ನಡೆಸುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ, ಅವರಿಗೆ ಅದು ಅರ್ಥವಾಗದಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಕೇಳಿದರು.
ಇದು ಹಿಂದುಳಿದವರ ಸಮೀಕ್ಷೆಯಲ್ಲ, ಇಡೀ ರಾಜ್ಯದ ಏಳು ಕೋಟಿ ಜನರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು 20 ಸಲ ಹೇಳಿದ್ದೇವೆ. ಜಾಹಿರಾತು ಕೂಡ ಕೊಟ್ಟಿದ್ದೇವೆ. ನಮ್ಮ ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದೇವೆ. ಅವುಗಳ ಲಾಭವನ್ನು ಮೇಲ್ಜಾತಿಯವರು ಪಡೆದುಕೊಳ್ಳುವುದಿಲ್ಲವೇ, ನಾರಾಯಣ ಮೂರ್ತಿ, ಸುಧಾಮೂರ್ತಿಯವರು ಇದು ಹಿಂದುಳಿದ ವರ್ಗದವರ ಸಮೀಕ್ಷೆ ಎಂದು ಭಾವಿಸಿದರೆ ಅದು ತಪ್ಪು. ಮುಂದೆ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತದೆ, ಆಗ ಅವರು ಏನು ಹೇಳುತ್ತಾರೆ ಎಂದು ಕೇಳಿದರು.ಅವರಿಗೆ ತಪ್ಪು ಮಾಹಿತಿ ಇರಬಹುದು, ಏನಿದ್ದರೂ ಅವರ ಇಷ್ಟ ಎಂದು ಸಿಎಂ ಹೇಳಿದರು.