January18, 2026
Sunday, January 18, 2026
spot_img

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆಯೇ? ಕೊನೆಗೂ ಅರೋಗ್ಯ ಸಚಿವರು ನೀಡಿದ್ರು ಸ್ಪಷ್ಟನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:


ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಅವರು, ಮೊಟ್ಟೆ ಸೇವನೆ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕಳೆದ ವರ್ಷ 147 ಮೊಟ್ಟೆ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಪರೀಕ್ಷಿಸಿದ ಮಾದರಿಗಳಲ್ಲಿ ಕೇವಲ ಒಂದು ಫೇಲ್ ಆಗಿದ್ದು, ಉಳಿದವು ಉತ್ತಮವಾಗಿದ್ದವು. ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು, ಸೇವಿಸಬಹುದು ಎಂದು ಭರವಸೆ ನೀಡಿದ್ದಾರೆ. ಮೊಟ್ಟೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ಶಾಲಾ ಮಕ್ಕಳಿಗೆ ಕೊಡಬಹುದು, ತಿನ್ನಬಹುದು, ಆರೋಗ್ಯಕರವಾಗಿದೆ ಎಂದು ಸ್ಪಷ್ಟಪಡಿಸಿದರು.

Must Read

error: Content is protected !!