ಹೊಸದಿಗಂತ ವರದಿ, ಮಂಗಳೂರು:
ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಹಿಂದು ಕಾರ್ಯಕರ್ತರ ಹತ್ಯೆಗಳು ಗ್ಯಾರಂಟಿ, ಅದು ಕಾಂಗ್ರೆಸ್ ಗ್ಯಾರಂಟಿ ಎಂದು ವಿಧಾನಸಭೆಯ ವಿಪಕ್ಷ ಪಕ್ಷದ ನಾಯಕ ಆರ್.ಆಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಬಜಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ,ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿಗೆ ಬರುವುದಕ್ಕಿಂತ ಮುನ್ನ ಘಟನೆಯ ಬಗ್ಗೆ ದ.ಕ.ಜಿಲ್ಲಾ ಪೊಲೀಸ್ ಕಮೀಷನರ್ ರೊಂದಿಗೆ ಮಾತನಾಡಿದ್ದು, ಘಟನೆ ನಡೆದು 24 ಗಂಟೆ ಕಳೆದರೂ ಆರೋಪಿಗಳನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದಾಗ ಪೊಲೀಸ್ ತಂಡವನ್ನು ರಚಿಸಿದ್ದೆವೆ ಎಂದು ಉತ್ತರಿಸಿದ್ದಾರೆ ಎಂದರು.
ಸುಹಾಸ್ ಶೆಟ್ಟಿಗೆ ಬೆದರಿಕೆ ಇರುವ ಬಗ್ಗೆ ಮಾಹಿತಿ ಇದ್ದರೂ ಕೂಡ ಪೊಲೀಸ್ ಇಲಾಖೆ ಯಾಕೆ ಭದ್ರತೆ ನೀಡಿಲ್ಲ. ಇದು ಪೊಲೀಸ್ ಇಲಾಖೆ ವೈಫಲ್ಯ ಸ್ಪಷ್ಟವಾಗಿದೆ. ಕರ್ನಾಟಕದಲ್ಲಿ ಪೊಲೀಸ್ ಇದ್ದಾರಾ? ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ ಎಂದರು.