ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆಯುವ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಈ ಒಂದು ಹೇಳಿಕೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಹೇಳಿಕೆ ಬಗ್ಗೆ ಒಂದೇ ಒಂದು ಹೇಳಿಕೆ ನೀಡದ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಈ ಕುಳ್ಳ, ಕರಿಯ ಅನ್ನೋಕೆ ನಾನು ಜಮೀರ್ ರೀತಿಯ ವಾತಾವರಣದಿಂದ ಬಂದಿಲ್ಲ. ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರಿಗೆ ನಿಜವಾಗಿಯೂ ಮಾನ ಮರ್ಯಾದೆ ಇದೆಯೇ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
ಸಿಎಂ ಡಿಸಿಎಂ ಗೃಹ ಸಚಿವರು ಈ ವಿಚಾರಕ್ಕೆ ಏನು ಹೇಳಿದ್ದಾರೆ ಎನ್ನುವುದು ಗೊತ್ತಿದೆ. ಈ ವಿಚಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದರೆ ಈ ಪ್ರಕರಣಕ್ಕೂ ಎಸ್ಐಟಿ ರಚನೆ ಮಾಡಿ ತನಿಖೆ ಮಾಡಲಿ. ಈ ರೀತಿಯ ಸರ್ಕಾರವನ್ನು ನಾಗರಿಕ ಸರ್ಕಾರ ಅಂತ ನಾವು ಕರಿಬೇಕಾ? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.