March 13, 2026
Friday, March 13, 2026
spot_img

ಬೆಂಗಳೂರಿನಲ್ಲಿ ಟ್ರಾಫಿಕ್‌ ರೂಲ್ಸ್‌ಗೆ ಬೆಲೆಯೇ ಇಲ್ವಾ? ಒನ್‌ವೇ ವಿರುದ್ಧ 23 ಸಾವಿರ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏಕಮುಖ ಸಂಚಾರ ಮಾಡುತ್ತಿರುವ ವಾಹನ ಸವಾರರ ವಿರುದ್ಧ ಸಂಚಾರಿ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುತ್ತಿದ್ದಾರೆ

ಜ.21 ರಿಂದ ವಿಶೇಷ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. 9 ದಿನಕ್ಕೆ ಬರೋಬ್ಬರಿ 23 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದರೆ ನಿನ್ನೆ ಒಂದೇ ದಿನ 3 ಸಾವಿರ ಪ್ರಕರಣ ದಾಖಲಾಗಿದೆ. ಅದರಲ್ಲೂ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ.

ಏಕಮುಖ ಸಂಚಾರದಿಂದ ವಾಹನ ದಟ್ಟಣೆ, ಸವಾರರಿಗೆ ಸಮಸ್ಯೆ ಆಗುತ್ತಿದೆ ಎಂದು ಪ್ರಯಾಣಿಕರು ಸಂಚಾರ ಪೊಲೀಸರಿಗೆ ದೂರು ನೀಡುತ್ತಿದ್ದರು. ಅಷ್ಟೇ ಅಲ್ಲದೇ ಕಾರಿನ ಡ್ಯಾಶ್‌ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ಅಪ್ಲೋಡ್‌ ಮಾಡಿ ದೂರು ಸಲ್ಲಿಸುತ್ತಿದ್ದರು.

ದಿನೇ ದಿನೇ ಒನ್‌ವೇ ಸವಾರರ ಕಿರಿಕಿರಿ ಜಾಸ್ತಿಯಾಗುತ್ತಿದ್ದಂತೆ ಪೊಲೀಸರು ಈಗ ಕಾರ್ಯಾಚರಣೆಗೆ ಇಳಿದಿದ್ದಾರೆ. ಒನ್ ವೇ ಸಂಚಾರದ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದವರೆಯುತ್ತದೆ ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !