ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಕಸಿತ ಭಾರತ ಅಭಿಯಾನವನ್ನು ವಾಟ್ಸಾಪ್‌ನಲ್ಲಿ ನಿರ್ಬಂಧಿಸುವಂತೆ ಕೇಂದ್ರ ಚುನಾವಣಾ ಆಯೋಗವು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೆಲವು ದಿನಗಳಿಂದ ದೇಶಾದ್ಯಂತ ವಾಟ್ಸಾಪ್‌ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಈ ಸಂದೇಶವು ನರೇಂದ್ರ ಮೋದಿ ಸರ್ಕಾರವನ್ನು ಉತ್ತೇಜಿಸುತ್ತದೆ.
ಇದೀಗ ಕೇಂದ್ರ ಚುನಾವಣಾ ಆಯೋಗವು ಈ ಸಂದೇಶಗಳನ್ನು ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕೇಳಿಕೊಂಡಿದೆ. ನೀತಿ ಸಂಹಿತೆ ಇದ್ದರೂ ಜನರ ಮೊಬೈಲ್ ಫೋನ್ ಗಳಿಗೆ ಇಂತಹ ಸಂದೇಶಗಳು ರವಾನೆಯಾಗುತ್ತಿವೆ ಎಂದು ಚುನಾವಣಾ ಆಯೋಗ ಹೇಳಿದೆ.