ವರಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನ ಚಿನ್ನ, ಬೆಳ್ಳಿ ಖರೀದಿಗೆ ಹೋಗ್ತಿದ್ದೀರಾ? ಇಂದು ಬೆಲೆ ಎಷ್ಟಿದೆ ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಇವತ್ತು ಬುಧವಾರವೂ ಮುಂದುವರಿದಿದೆ. ಎರಡು ದಿನಗಳಿಂದ 80 ರೂಗೂ ಹೆಚ್ಚು ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಇವತ್ತು 10 ರೂಗಳಷ್ಟು ಅಲ್ಪ ಏರಿಕೆ ಪಡೆದಿದೆ.

ಬೆಳ್ಳಿ ಬೆಲೆ ಗ್ರಾಮ್​ಗೆ 1 ರೂ ಏರಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿ ಚಿನ್ನ ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,750 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!