ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವಾರಾಂತ್ಯದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬ ಒಟ್ಟೊಟ್ಟಿಗೆ ಬರುತ್ತಿದೆ, ಮಕ್ಕಳಿಗೆ ಬೇಸಿಗೆ ರಜೆ ಕೂಡ ಆರಂಭವಾಗುತ್ತಿದೆ. ಹೀಗಾಗಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ, ಪ್ರವಾಸ ಹೋಗುವಿಕೆ ಹೆಚ್ಚಾಗುತ್ತದೆ. ರೈಲು, ಸರ್ಕಾರಿ ಬಸ್ಸುಗಳಲ್ಲಿ ಅತಿಯಾದ ರಶ್ ಇರುವ ಕಾರಣ ಜನ ಖಾಸಗಿ ಬಸ್ ಮೊರೆ ಹೋಗಿದ್ದಾರೆ. ಆದರೆ ಖಾಸಗಿ ಬಸ್‌ಗಳ ದರ ಕೇಳಿ ಶಾಕ್ ಆಗಿದ್ದಾರೆ.
ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಖಾಸಗಿ ಬಸ್ ಮಾಲೀಕರು ಟಿಕೆಟ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರುತ್ತಿದ್ದಾರೆ. ಖಾಸಗಿ ಬಸ್ಸುಗಳ ಮಾಲೀಕರು ಪ್ರಯಾಣಿಕರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್ ಎದುರಾಗಿದೆ.