ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲಾ ಮೂರ್ತಿ ಪ್ರಾಣಪತಿಸ್ಥಾಪನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಕೊನೆಗೊಂಡಿತು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರಗಳು ಮುಂದುವರಿದಿವೆ. ಸಿಎಂ ಸಿದ್ದರಾಮಯ್ಯ ಹೇಳಿಕೆಗಳಿಗೆ ಬಿಜೆಪಿ ನಾಯಕರು ಕೌಂಟರ್ ಅಟ್ಯಾಕ್ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕಾರಣಿಗಳ ಹೇಳಿಕೆಗೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಇದೀಗ ವಿಪಕ್ಷ ನಾಯಕ ಆರ್.ಅಶೋಕ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಹಾತ್ಮ ಗಾಂಧಿ ಕೂಡ ರಾಮನ ಅನುಯಾಯಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದೀರಿ. ಹಾಗಾದರೆ ನೀವು ಅವರ ಕಳವಳಗಳನ್ನು ಏಕೆ ಹಂಚಿಕೊಳ್ಳಬಾರದು ಮತ್ತು ಗೋಹತ್ಯೆ ನಿಷೇಧದ ಬಗ್ಗೆ ಅವರಿಗೆ ಇರುವ ಕಾಳಜಿ, ನಿಲುವನ್ನು ಏಕೆ ಒಪ್ಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಮೂಲಕ ಪೋಸ್ಟ್ ಮಾಡಿರುವ ಆರ್. ಅಶೋಕ್, ಸಿಎಂ ಸಿದ್ದರಾಮಯ್ಯ ಅವರಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಯುವನಿಧಿ ಗ್ಯಾರಂಟಿ ಹೆಸರಿನಲ್ಲಿ ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ಕಾಲೆಳೆದಿದ್ದಾರೆ.