ಜಿ20 ಶೃಂಗಸಭೆ: ದೆಹಲಿಗೆ ಆಗಮಿಸಿದ ಅರ್ಜೆಂಟೀನಾ ಅಧ್ಯಕ್ಷ ಆಲ್ಬರ್ಟೊ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅರ್ಜೆಂಟೀನಾ ಅಧ್ಯಕ್ಷ ಅಲ್ಬರ್ಟೊ ಏಂಜೆಲ್ ಫೆರ್ನಾಂಡಿಸ್ ಇಂದು ನವದೆಹಲಿಗೆ ಆಗಮಿಸಿದ್ದಾರೆ. ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಅವರು ಸ್ವಾಗತಿಸಿದರು.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಭಾರತ್ ಮಂಟಪದಲ್ಲಿ ಶನಿವಾರ ಮತ್ತು ಭಾನುವಾರ ಜಿ20 ನಾಯಕರ ಶೃಂಗಸಭೆಯನ್ನು ಭಾರತವು ಆಯೋಜಿದೆ.

ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿರುವುದು ಇದೇ ಮೊದಲು. ಈ ಸಭೆಯಲ್ಲಿ ಅನೇಕ ಜಾಗತಿಕ ನಾಯಕರು ಮತ್ತು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!