ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ. ಕೆಲ ವಕೀಲರ ನಡುವೆ ವಾಗ್ವಾದ ಏರ್ಪಟ್ಟಿದ್ದು, ವಾದ ಅತಿರೇಕಕ್ಕೆ ತಿರುಗಿ ಗುಂಡಿನ ದಾಳಿ ಆರಂಭವಾಗಿದೆ.
ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ. ಆದರೂ ಗನ್ ತಂದಿದ್ದು ಏಕೆ? ಯಾರು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.